ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಅಕ್ರಮ.!

 

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಕೆಲವು ಅಧಿಕಾರಿಗಳು ಸಾರ್ವಜನಿಕರ ದಾಖಲೆ ದುರ್ಬಳಕೆ ಮಾಡಿಕೊಂಡು 10 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆಸಿರುವುದನ್ನು ಸಿಐಡಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ನೇರ ಸಾಲ ಯೋಜನೆ, ಉದ್ಯಮಶೀಲತಾ ಯೋಜನೆಯಡಿಯ ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಜನರಿಂದ ಗುರುತಿನ ದಾಖಲೆ, ಬ್ಯಾಂಕ್ ಚೆಕ್ ಪಡೆದು ಹಣ ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ಗೊತ್ತಾಗಿದೆ.

Advertisement

ಪ್ರಕರಣದ ಪ್ರಮುಖ ಆರೋಪಿ ಪಿ.ಡಿ. ಸುಬ್ಬಪ್ಪ ಅವರನ್ನು ಸಿಐಡಿ ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ. ನಿಗಮದ ಕಚೇರಿಯಲ್ಲಿ 2021ರ ಏಪ್ರಿಲ್ 5ರಿಂದ 2022ರ ಜುಲೈ 8ರವರೆಗೆ ಕಚೇರಿ ಅಧೀಕ್ಷಕರಾಗಿದ್ದ ಪಿ.ಡಿ. ಸುಬ್ಬಪ್ಪ ವರ್ಗಾವಣೆಯಾದ ಸಂದರ್ಭದಲ್ಲಿ ಕಚೇರಿ ಕಡತಗಳನ್ನು ಹಸ್ತಾಂತರ ಮಾಡಿಲ್ಲ. ನಗದು ಪುಸ್ತಕ, ಯೋಜನಾ ಕಡತ, ಬ್ಯಾಂಕ್ ಲೆಕ್ಕಪತ್ರ ಕಡತ ಮೊದಲಾದವುಗಳಿಗೆ ಸಂಬಂಧಿಸಿದ 221 ಕಡತಗಳನ್ನು ಅವರು ಕಳವು ಮಾಡಿದ್ದಾರಂತೆ.!

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement