ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಪ್ರತಿಕ್ರಿಯಿಸಿದ ಇಬ್ರಾಹಿಂ, ‘ಅವರ (ದೇವೇಗೌಡ) ನಿರ್ಧಾರವನ್ನು ಕೋರ್ಟ್ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ ಎಂದು ಇಬ್ರಾಹಿಂ ಹೇಳಿದ್ದಾರೆ.
ಗೌಡರ ಪುತ್ರ ವ್ಯಾಮೋಹ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಕಾದು ನೋಡಿ ಎಂದಿದ್ದಾರೆ. ಗೌಡರಿಗೆ ಸ್ವಲ್ಪವಾದರೂ ಪ್ರಜ್ಞೆ ಬೇಡವಾ? ನನ್ನ ಜತೆ ಮಾತಾಡಬೇಕು ಅಂತ ಅನ್ನಿಸಲಿಲ್ವಾ? ಇದ್ದ ಪರಿಷತ್ ಸ್ಥಾನ ಬಿಟ್ಟು ಬಂದರೆ ಹೀಗಾ ಮಾಡೋದು? ಎಂದಿದ್ದಾರೆ.