ಬೆಂಗಳೂರು: ನಾಳೆ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3 ನಾಳೆ ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರವ್ಯಾಪ್ತಿಯ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಪದವೀಧರರು, ಶಾಲಾ ಶಿಕ್ಷಕರಿಗೆ ರಜೆ.
ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಮತದಾನದ ಮಾಡಲು ರಜೆ ಮಂಜೂರು
ಬೆಂಗಳೂರು ಪದವೀಧರ ಕ್ಷೇತ್ರದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ರಜೆ.
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗ, ದಾವಣಗೆರೆ( ಚೆನ್ನಗಿರಿ, ಹೊನ್ನಾಳಿ, ಹರಪನಹಳ್ಳಿ ತಾಲೂಕುಗಳನ್ನು ಹೊರತುಪಡಿಸಿ) ತುಮಕೂರು ಹಾಗೂ ಕೋಲಾರ ಜಿಲ್ಲೆಯಲ್ಲಿ ಸಾಂದರ್ಭಿಕ ರಜೆ ಘೋಷಣೆ
ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣೆಗರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಜೂನ್.3ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು.