ಹೊಸಪೇಟೆ : 2023-24ನೇ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಧಾನ ಮಂತ್ರಿ ಮತ್ಸö್ಯ ಸಂಪದ ಯೊಜನೆಯ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಬ್ಯಾಕ್ಯಾರ್ಡ್ ಮಿನಿ ಆರ್‌ಎಎಸ್ ಸಾಮಾನ್ಯ-02, ಮಹಿಳೆ-01 ಮತ್ತು ಪ.ಜಾತಿ-01 ಗುರಿ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳೆ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.60ರಷ್ಟು ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚ ಶೇ.40ರಂತೆ ಸಹಾಯ ಧನ ನೀಡಲಾಗುತ್ತಿದ್ದು. ಅ.31ರೊಳಗೆ ಅರ್ಜಿಗಳನ್ನು ಸಂಬAಧಪಟ್ಟ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರು ಹಾಗೂ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ, ಮತ್ತು ಹರಪನಹಳ್ಳಿ ತಾಲ್ಲೂಕುಗಳ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.