ಬಿರ್ಸಾ ಮುಂಡಾ ಹೆಸರಲ್ಲಿ ಪ್ರಾರಂಭವಾಗಲಿ ಶಾಲಾ-ಕಾಲೇಜು:  -ಸಂಸದ ಗೋವಿಂದ ಎಂ ಕಾರಜೋಳ

 

ಚಿತ್ರದುರ್ಗ: ದೇಶದ ಸಲುವಾಗಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಭಗವಾನ್ ಬಿರ್ಸಾ ಮುಂಡಾ ಅವರ ಹೆಸರಿನಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭ ಮಾಡಬೇಕು. ಆಗ ಮಾತ್ರ ಯುವ ಜನತೆಗೆ ಅವರ ಹೋರಾಟದ ಮಹತ್ವ ಹಾಗೂ ಅವರ ಪರಿಚಯವಾಗಲಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಮೀಪದ ಕ್ರೀಡಾ ಭವನದಲ್ಲಿ ಶುಕ್ರವಾರ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಧರ್ತಿ ಆಭಾ  ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವ  ಬುಡಕಟ್ಟು ಸಮುದಾಯಗಳ ಹೆಮ್ಮೆಯ ದಿನಾಚರಣೆ ಹಾಗೂ ಧರ್ತಿ ಆಭಾ ಜನ್‍ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ  ಬಿರ್ಸಾ ಮುಂಡಾ ಅವರ ಪರಿಚಯನ್ನು ಸರ್ಕಾರಿ ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಪರಿಚಯ ಮಾಡಬೇಕು. ಇದರಿಂದ ಇಂದಿನ ಯುವ ಜನತೆಗೆ ಅವರ ಪರಿಚಯ ಹಾಗೂ ಹೋರಾಟದ ಮಹತ್ವವೂ ತಿಳಿಯಲಿದೆ. ಇದರಿಂದ ದೇಶದ ಐಕ್ಯತೆ, ಏಕತೆ, ದೇಶಪ್ರೇಮ ಬೆಳೆಸುವ ಹಾಗೂ ದೇಶದ ಮಹತ್ವದ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಯುವ ಜನಾಂಗಕ್ಕೆ ಪ್ರೋತ್ಸಾಹ ನೀಡಿದಂತೆಯೂ ಆಗಲಿದೆ ಎಂದು ತಿಳಿಸಿದರು.

ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವನ್ನು ದೇಶದ ಉದ್ದಗಲಕ್ಕೂ ಆಚರಣೆ ಮಾಡಲಾಗುತ್ತಿದೆ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕ ಆದಿವಾಸಿಗಳು, ಗುಡ್ಡಗಾಡು ಜನರು, ಕೆಳವರ್ಗದವರು ಹೋರಾಟ  ಮಾಡಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದು ತಿಳಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲಗಲಿ ಬೇಡರ ಕೊಡುಗೆ ಅಪಾರ ಎಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ವತಿಯಿಂದ ಮಣ್ಣು ಪರೀಕ್ಷೆ ಕಾರ್ಡ್ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಫಲಾನುಭವಿಗಳಿಗೆ ಸಂಸದ ಗೋವಿಂದ ಎಂ. ಕಾರಜೋಳ ವಿತರಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಮಾಧುರಿ ಗಿರೀಶ್, ಮುರುಳಿ ಇದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement