ಚಾಮರಾಜನಗರ: ಡಿವಿ ಸದಾನಂದ ಗೌಡ ಅವರ ಚುನಾವಣಾ ರಾಜಕೀಯ ನಿವೃತ್ತಿ ಬೆನ್ನಲ್ಲೇ BJPಯ ಮತ್ತೊಬ್ಬ ಹಿರಿಯ ಸಂಸದ ಸಹ ಚುನಾವಣಾ ರಾಜಕೀಯಕ್ಕೆ ಗುಡ್ಬೈ ಹೇಳಿದ್ದಾರೆ.
ಚಾಮರಾಜನಗರ ಸಂಸದ ಹಾಗೂ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅಧಿಕೃತವಾಗಿ ಈ ಘೋಷಣೆ ಮಾಡಿದ್ದಾರೆ. 2024ರ ಮಾರ್ಚ್ 17ರಂದು ಬಹಿರಂಗ ಸಭೆಯಲ್ಲಿ ತೀರ್ಮಾನ ಪ್ರಕಟಿಸುವುದಾಗಿ ಶ್ರೀನಿವಾಸ್ ಪ್ರಸಾದ್ ಪ್ರಕಟಿಸಿದ್ದಾರೆ. ರಾಜಕೀಯ ಕ್ಷೇತ್ರಕ್ಕೆ ಬಂದು 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಈ ತೀರ್ಮಾನ ಕೈಗೊಂಡಿದ್ದಾಗಿ ಅವರು ಹೇಳಿದ್ದಾರೆ.