ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬರುವವರೆಗೂ ಕಾಯುವುದಿಲ್ಲ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1ನೇ ಕಂತಿನಲ್ಲಿ 2 ಸಾವಿರ ರೂ.ವರೆಗೂ ಬೆಳೆ ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಗುರುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ 2 ಸಾವಿರ ರೂ.ವರೆಗೂ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ. ಇನ್ನು ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.