ವಕ್ಫ್ ಬೋರ್ಡ್ ಆಸ್ತಿಗಳಲ್ಲಿ ವಸತಿ, ಆಸ್ಪತ್ರೆ ಹಾಗೂ ಕಾಲೇಜುಗಳ ನಿರ್ಮಾಣ ಚಿಂತನೆ  -ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್

 

ಚಿತ್ರದುರ್ಗ: ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ವಕ್ಫ್ ಬೋರ್ಡ್ ಆಸ್ತಿಗಳಿವೆ. ಈ ಜಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ವಸತಿ, ಆಸ್ಪತ್ರೆ ಹಾಗೂ ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಚೋಳಗುಡ್ಡದ ಅಗಸನಕಲ್ಲು ರಸ್ತೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಂಜುಮಾನ್ ಎ ದಾರೂಲ್ ಹುದಾ ಸಂಸ್ಥೆ ಕೊಹೇನೂರ್ ಶಾದಿಮಹಲ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

Advertisement

ವಕ್ಫ್ ಬೋರ್ಡ್ ಆಸ್ತಿಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದರೆ, ಸರ್ಕಾರದ ಅನುದಾನಕ್ಕೆ ಕಾಯುವ ಅವಶ್ಯಕತೆ ಬರುವುದಿಲ್ಲ. ಅಲ್ಪಸಂಖ್ಯಾತರ ಅಭಿವೃದ್ಧಿ ಬಯಸಿ ಜನರು ನನ್ನನ್ನು ಹರಿಸಿದ್ದಾರೆ. ಇದರಿಂದಾಗಿ ಸರ್ಕಾರದಲ್ಲಿ ಸಚಿವ ಸ್ಥಾನ ಲಭಿಸಿದೆ. ಜನರ ಅಭಿವೃದ್ಧಿಗೆ ಸದಾ ಶ್ರಮಿಸುತ್ತೇನೆ ಎಂದರು.

ಅಲ್ಪಸಂಖ್ಯಾತ ಸಮುದಾಯದ ಜನರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ನಮ್ಮ ಹಣೆ ಬರಹ ಇμÉ್ಟೀ ಎಂದು ಕೈ ಕಟ್ಟಿ ಕೂರಬಾರದು. ಡ್ರೈವರ್, ಮೆಕಾನಿಕ್, ಹಮಾಲಿ, ಕೂಲಿ ಕೆಲಸ ಮಾಡುವರರ ಮಕ್ಕಳು ಅದೇ ವೃತ್ತಿ ಮಾಡಬೇಕು ಎಂದೇನೂ ಇಲ್ಲ.  ಕಷ್ಟಪಟ್ಟು ದುಡಿದರೆ ಪ್ರತಿಫಲ ದೊರಕುವುದು ಎಂದು ಸಚಿವ ಜಮೀರ್ ಅಹಮದ್ ಹೇಳಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement