ಶೀಘ್ರದಲ್ಲಿಯೇ ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆ.! ಸಿಎಂ ಸಿದ್ದರಾಮಯ್ಯ

 

 

ಶಿರಸಿ: ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ. ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಅಂತ ಸಿಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ..

Advertisement

ಅವರು ಶಿರಸಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು  ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ ಎಂದರು.

ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಪ್ರಶ್ನಿಸಿದರು. ಜಿಲ್ಲೆಗೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿದ್ದು, ಈ ಬಗ್ಗೆ ಆಯವ್ಯಯದಲ್ಲಿ ಪ್ರಸ್ತಾಪವಿಲ್ಲದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement