545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.!

 

 

ಬೆಂಗಳೂರು: ಈ ಹಿಂದೆ 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ. ಇದರಲ್ಲಿ 545 ಪಿಎಸ್ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.

Advertisement

ದಿನಾಂಕ: 06.06.2020 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಆಯ್ಕೆ ಪಟ್ಟಿಯು ಮಾನ್ಯ ಉಚ್ಚ ನ್ಯಾಯಾಲಯವು ಪಿಟಿಷನ್ 20:16343/202400 ನೀಡುವ ತೀರ್ಪಿಗೊಳಪಟ್ಟಿರುತ್ತದೆಂದು ಹಾಗೂ ಈ ಆಯ್ಕೆ ಪಟ್ಟಿಯಲ್ಲಿ ವೃಂದ ಬದಲಾವಣೆ, ಮೀಸಲಾತಿ ಪ್ರವರ್ಗ ಬದಲಾವಣೆ, ಅರ್ಹತಾ ಪಟ್ಟಿಯಲ್ಲಿನ ಸ್ಥಾನ ಮತ್ತು ಘಟಕಗಳ ಬದಲಾವಣೆ ಆಗುವ ಸಾಧ್ಯತೆಗೊಳಪಟ್ಟಿರುತ್ತದೆ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement