ಚೆನ್ನೈ: ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ.
ವಿಲ್ಲುಪುರಂ ಮೈಲಾಡುತುರೈ ಎಕ್ಸ್‌ಪ್ರೆಸ್ ರೈಲಿನಿಂದ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಹತ್ತಾರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಗೊಂಡ 10 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ. ರೈಲು ಸಂಚಾರದ ವೇಳೆ ಗೇಟ್‌ಕೀಪರ್ ಗೇಟ್ ಹಾಕಿರಲಿಲ್ಲ ಎಂದು ಹೇಳಲಾಗಿದ್ದು, ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಇನ್ನೂ ಗಾಯಗೊಂಡ ವಿದ್ಯಾರ್ಥಿಗಳ ಪೋಷಕರು ಘಟನೆಯ ಸ್ಥಳಕ್ಕೆ ಧಾವಿಸಿ ಗೇಟ್‌ಕೀಪರ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ರೈಲು ಹಾಗೂ ಶಾಲಾ ಬಸ್ ಬರುತ್ತಿದ್ದಾಗ, ಗೇಟ್‌ಕೀಪರ್ ನಿದ್ರಿಸುತ್ತಿದ್ದ ಎಂದು ಆರೋಪಿಸಿದ್ದಾರೆ.