ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆ. 5 ರಂದು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಕರೆಕೊಟ್ಟಿದ್ದಾರೆ.
ಇದರ ನಡುವೆಯೇ ಸಾರಿಗೆ ಇಲಾಖೆ ನೌಕರರಿಗೆ ಎಚ್ಚರಿಕೆ ಕೊಟ್ಟಿದ್ದು, ಆ. 4 ರಿಂದಲೇ ಅನ್ವಯವಾಗುವಂತೆ ಸಾರಿಗೆ ನೌಕರರ ರಜೆಯನ್ನು ಅನಿರ್ಧಿಷ್ಚಾವಧಿ ವರೆಗೆ ರದ್ದು ಮಾಡಿ ಸುತ್ತೋಲೆ ಹೊರಡಿಸಿದೆ.
ಆಯಾ ನಿಗಮದ ಅಧಿಕಾರಿಗಳಿಗೆ ಈ ಸಂಬಂಧ ಸೂಚನೆ ನೀಡಿದೆ. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರವೇ ರಜೆ ನೀಡುವಂತೆ ಆದೇಶಿಸಲಾಗಿದೆ. ಅಗತ್ಯವಿದ್ದಲ್ಲಿ ವಾರದ ರಜೆಯನ್ನು ಸಹ ರದ್ದು ಮಾಡುವಂತೆ ಸೂಚಿಸಲಾಗಿದೆ. ಮುಷ್ಕರದ ಸಮಯದಲ್ಲಿ ರಜೆ ಹಾಕುವ ನೌಕರರ ಸಂಬಳಕ್ಕೂ ಕತ್ತರಿ ಹಾಕುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.