ನವದೆಹಲಿ: ವಿವಾಹ ವಾರ್ಷಿಕೋತ್ಸವದಂದೇ ವ್ಯಕ್ತಿಯೋರ್ವ ಪತ್ನಿ ಹಾಗೂ ಮಗಳೊಂದಿಗೆ ಶವವಾಗಿ ಪತ್ತೆಯಾದ ಘಟನೆ ಇಂದು ಬೆಳಗ್ಗೆ ದಕ್ಷಿಣ ದೆಹಲಿಯ ನೆಬ್ ಸರಾಯ್‌ನಲ್ಲಿ ನಡೆದಿದೆ.
ಮೃತರನ್ನು ರಾಜೇಶ್ (53), ಅವರ ಪತ್ನಿ ಕೋಮಲ್ (47) ಮತ್ತು ಅವರ 23 ವರ್ಷದ ಮಗಳು ಕವಿತಾ ಎಂದು ಗುರುತಿಸಲಾಗಿದೆ. ಮೂವರನ್ನೂ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜೇಶ್ ಅವರ ಮಗ ಅರ್ಜುನ್ ಬೆಳಗಿನ ವಾಕ್ ಮುಗಿಸಿ ಹಿಂತಿರುಗಿದಾಗ ತಂದೆ, ತಾಯಿ ಹಾಗೂ ಸಹೋದರಿಯ ಮೃತದೇಹಗಳನ್ನು ಕಂಡು ಶಾಕ್‌ಗೆ ಒಳಗಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.