ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಗೆ ಆಮಿಷ ಒಡ್ಡಿರುವ ಪ್ರಕರಣ ವಸತಿ ಸಚಿವ ಸೋಮಣ್ಣಗೆ ಕಂಟಕವಾಗುವ ಸಾಧ್ಯತೆಯಿದೆ.
ಚುನಾವಣಾ ಆಯೋಗ ವಿ.ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿ ಸ್ಥಾನದಿಂದ ಅನರ್ಹಗೊಳಿಸುವ ಸಾಧ್ಯತೆಯೂ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8(1) (ಎ) ಅಡಿಯಲ್ಲಿ ಅಭ್ಯರ್ಥಿಯನ್ನು ಚುನಾವಣೆಯಿಂದ ಅನರ್ಹಗೊಳಿಸಬಹುದು. ಸೋಮಣ್ಣ ವಿರುದ್ಧ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.