ವಾಷಿಂಗ್ಟನ್ : ಈ ಹಿಂದೆ ರಷ್ಯಾ-ಉಕ್ರೇನ್ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದಿದ್ದ ಡೊನಾಲ್ಡ್ ಟ್ರಂಪ್ ವ್ಯಾಪಾರ ಸಲಹೆಗಾರ ಪೀಟರ್ ನವರೊ ಇದೀಗ ಭಾರತದವರನ್ನು ಪ್ರಚೋದಿಸಲು ಜಾತಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.
ಟಿವಿ ವಾಹಿನಿಯೊಂದಿಗೆ ಮಾತನಾಡಿದ ಪೀಟರ್ ನವರೊ, “ನಾನು ಭಾರತೀಯ ಜನರಿಗೆ ಹೇಳುತ್ತೇನೆ, ದಯವಿಟ್ಟು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು ಲಾಭ ಗಳಿಸಿ ಭಾರತೀಯ ಜನರ ವೆಚ್ಚದಲ್ಲಿ ಶ್ರೀಮಂತರಾಗುತ್ತಿದ್ದಾರೆ. ಇದನ್ನು ನಾವು ನಿಲ್ಲಿಸಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
“ಮೋದಿ ಒಬ್ಬ ಮಹಾನ್ ನಾಯಕ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ ಅವರು ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್ ಜೊತೆ ಯಾಕೆ ಮಾತನಾಡುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ” ಎಂದಿದ್ದಾರೆ.
ಇನ್ನು ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಮೋದಿ, ಪುಟಿನ್, ಕ್ಸಿ ಜಿನ್‌ಪಿಂಗ್ ಮಾತುಕತೆ ನಡೆಸುತ್ತಿರುವ ಮಹತ್ವದ ಸಮಯದಲ್ಲೇ ಟ್ರಂಪ್ ಆಪ್ತ ಈ ರೀತಿ ಶಾಂಕಿಂಗ್ ಹೇಳಿಕೆ ನೀಡಿರುವುದು ವಿಶೇಷ.