ತಿರುಪತಿ: TTDಆಡಳಿತ ಮಂಡಳಿಯು ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಆವರಣ ಮತ್ತು ಅದಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ರೀಲ್ಸ್ಗಳನ್ನು ಮಾಡದಂತೆ ಭಕ್ತರಿಗೆ ಸೂಚನೆ ನೀಡಿದೆ.
ಕೆಲವು ವ್ಯಕ್ತಿಗಳು ದೇವಾಲಯದ ಆವರಣದಲ್ಲಿ ಕಿಡಿಗೇಡಿತನ, ಅನುಚಿತ ವರ್ತನೆಗಳ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಹರಿಯ ಬಿಡುತ್ತಿದ್ದಾರೆ. ಇದರಿಂದ ಆಧ್ಯಾತ್ಮಿಕ ವಾತಾವರಣವನ್ನು ಕಾಪಾಡಿಕೊಳ್ಳುವುದು ಸವಾಲಿನ ಕೆಲಸವಾಗುತ್ತಿದೆ ಎಂದು TTD ಪ್ರಕಟಣೆಯಲ್ಲಿ ತಿಳಿಸಿದೆ.
ದೇವಾಲಯದ ಆವರಣದಲ್ಲಿ ಆಕ್ಷೇಪಾರ್ಹ ರೀತಿಯಲ್ಲಿ ನಡೆದುಕೊಳ್ಳುವವರ ವಿರುದ್ಧ ಭದ್ರತಾ ಸಿಬ್ಬಂದಿ ಕಣ್ಗಾವಲು ಇರಲಿದ್ದು, ನಿಯಮ ಮುರಿದರೆ ಕಾನೂನಾತ್ಮಕ ಕ್ರಮದ ಎಚ್ಚರಿಕೆಯನ್ನು ಸಹ ನೀಡಿದೆ.