ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ಆರೋಪಿ ಚಿನ್ನಯ್ಯನ ಜೊತೆಯಲ್ಲಿ ಕರೆದುಕೊಂಡು ಬಂದು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಅಶ್ರಯ ನೀಡಿದ್ದರಿಂದ ಚಿನ್ನಯ್ಯನಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.