ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಾಞಾಂಗಾಡ್ ನ ಮಾಣಿಕ್ಕೋತ್‌ನಲ್ಲಿ ನಡೆದಿದೆ.
ಓರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಮೃತಪಟ್ಟ ಮಕ್ಕಳು.
ಅನ್ವರ್ ನ ಸಹೋದರ ಹಾಶಿಮ್ ನನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಣಿ ಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ.
ಮಾಹಿತಿ ತಿಳಿದು ನಾಗರಿಕರು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ಮಕ್ಕಳನ್ನು ಹೊರ ತೆಗೆದರೂ ಇಬ್ಬರು ಮೃತಪಟ್ಟಿದ್ದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.