ನವದೆಹಲಿ : ರಾಷ್ಟ್ರ ರಾಜಧಾನಿಯ ರೋಹಿಣಿಯ ಸೆಕ್ಟರ್ 17 ರಲ್ಲಿರುವ ಶ್ರೀ ನಿಕೇತನ ಅಪಾರ್ಟ್‌ಮೆಂಟ್ ಬಳಿಯ ಜುಗ್ಗಿಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರ ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಗಿದ್ದು, ಹೆಚ್ಚಿನ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎನ್ನಲಾಗಿದೆ. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬೆಂಕಿಯ ಕಾರಣ ಇನ್ನೂ ಖಚಿತವಾಗಿಲ್ಲ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಪಶ್ಚಿಮ ವಲಯದ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎಂ.ಕೆ. ಚಟ್ಟೋಪಾಧ್ಯಾಯ ಹೇಳಿದ್ಧಾರೆ.