ಅಂಗುಲ್ : ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಭಾನುವಾರ ಸಂಭವಿಸಿದೆ.
ಅಂಗುಲ್‌ನಿಂದ ಬರಿಪಾಡಾಗೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ರಸ್ತೆಯಿಂದ ಸ್ಕಿಡ್ ಆಗಿ ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 50 ರಿಂದ 60 ಮಂದಿಯ ಪೈಕಿ ಇಬ್ಬರು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರು ಮತ್ತು ಸ್ಥಳೀಯರು ಜಂಟಿ ಕಾರ್ಯಾಚರಣೆ ನಡೆಸಿ ಗಂಭೀರವಾಗಿ ಗಾಯಗೊಂಡಿರುವ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವನ್ನು ತನಿಖೆ ನಡೆಸಲಾಗುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ವರದಿ ತಿಳಿಸಿದೆ. ಇನ್ನು ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.