ಶ್ರೀಮುರಳಿ ಅವರಿಗೆ ಮಂಗಳವಾರ ಬರ್ತ್‌ಡೇ ಹಿನ್ನೆಲೆಯಲ್ಲಿ ಅವರ ಎರಡು ಹೊಸ ಚಿತ್ರಗಳು ಘೋಷಣೆಯಾಗಿವೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಈ ಸಂಸ್ಥೆ ನಿರ್ಮಾಣ ಮಾಡಲಿರುವ ಸಿನಿಮಾದಲ್ಲಿ ನಾಯಕನಾಗಿ ಶ್ರೀಮುರಳಿ ನಟಿಸಲಿದ್ದಾರೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಸಿನಿಮಾ ನಿರ್ಮಾಣದ ಮೂಲಕ ಕನ್ನಡ ಚಿತ್ರೋದ್ಯಮ ಪ್ರವೇಶಿಸುತ್ತಿದೆ. ಶ್ರೀಮುರಳಿ ಬರ್ತ್‌ಡೇಗೆ ಅಧಿಕೃತ ಪೋಸ್ಟರ್ ಬಿಡುಗಡೆ ಆಗಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಮುಂದಿನ ದಿನಗಳಲ್ಲಿ ನಿರ್ದೇಶಕರು, ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದೆ.“ಪರಾಕ್’ ಎಂಬ ಹೊಸ ಚಿತ್ರ ಘೋಷಣೆಯಾಗಿದೆ.
ನವ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಮಾರ್ಚ್‌ನಲ್ಲಿ ಪರಾಕ್ ಚಿತ್ರದ ಶೂಟಿಂಗ್ ಶುರುವಾಗಲಿದೆ. ಬ್ರಾಂಡ್ ಸ್ಟುಡಿಯೋಸ್ ಬ್ಯಾನರ್‌ನಡಿ ಪರಾಕ್ ಸಿನಿಮಾ ನಿರ್ಮಾಣವಾಗುತ್ತಿದೆ.