ಕಾರವಾರ : ತಮಿಳು ನಾಡಿನಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರಲ್ಲಿ ಇಬ್ಬರು ಸಮುದ್ರದ ಅಲೆಗೆ ಸಿಲುಕಿ
ಸಾವನ್ನಪ್ಪಿದ ಘಟನೆ ನಡೆದಿದೆ.
ತಮಿಳುನಾಡಿನ ತಿರುಚಿಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರಾದ ಕನಿಮೋಳಿ ,ಹಿಂದುಜಾ ಮೃತಪಟ್ಟ ಕಂಡ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ .
ಸಮುದ್ರದಂಚಿನ ಬಂಡೆಗಲ್ಲಿನ ಮೇಲೆ ವಿದ್ಯಾರ್ಥಿನಿಯರು ಕುಳಿತಿದ್ದರು. ಬಂಡೆಗಲ್ಲಿಗೆ ರಭಸದ ಅಲೆ ಬಡಿದಾಗ ನಾಲ್ವರು ಸಮುದ್ರಕ್ಕೆ ಬಿದ್ದರು. ಇಬ್ಬರು ವಿದ್ಯಾರ್ಥಿನಿಯರು ಪಾರಾದರೆ, ಇನ್ನಿಬ್ಬರು ಸಮುದ್ರದ ಅಲೆಗೆ ಸಿಲುಕಿದರು. ಅವರ ರಕ್ಷಣೆ ಸಾಧ್ಯವಾಗಲಿಲ್ಲ .
ಇವರನ್ನು ರಕ್ಷಣೆ ಮಾಡಲು ಹೋದ ಸ್ಥಳೀಯ ಅಲೆಗಳ ಹೊಡೆತಕ್ಕೆ ಕೊಚ್ಚಿಹೋಗಿದ್ದ. ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನಿಂದ ಗೋಕರ್ಣಕ್ಕೆ 23 ವೈದ್ಯಕೀಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಾಗ ಈ ದುರ್ಘಟನೆ ನಡೆದಿದೆ.
ಈ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.