ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಗುಂಡಿಟ್ಟು ಕೊಲೆ ಮಾಡಿದ ಘಟನೆ ಶನಿವಾರ ಮಲ್ಪೆ ಸಮೀಪದ ಕೊಡವೂರು ಬಳಿ ನಡೆದಿದೆ.
ಮಣಿಪಾಲದಲ್ಲಿ ಸಾರಿಗೆ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದ ಸೈಫುದ್ದೀನ್, ಅಪರಿಚಿತ ದಾಳಿಕೋರರು ಗುಂಡು ಹಾರಿಸಿದಾಗ ದಾಳಿಗೆ ಗುರಿಯಾದರು ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಗುಂಡೇಟಿನ ಬಳಿಕ ಆರೋಪಿಗಳು ಅವರನ್ನು ಮತ್ತಷ್ಟು ಹಲ್ಲೆಗೊಳಪಡಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿದ್ದು ಮಾಹಿತಿ ಪಡೆದಿದ್ದಾರೆ. ಪ್ರಕರಣದ ಸಂಬಂಧ ಮಲ್ಪೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
