ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಯುವಕನ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.
ಕಾರ್ತಿಕ್ ಪೂಜಾರಿ ಶವ ಬಾವಿಯಲ್ಲಿ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ಯುವತಿ ರಕ್ಷಿತಾಳನ್ನು ಚಾಕುವಿನಿಂದ ಇರಿದಿದ್ದ.
ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಇದೀಗ ಯುವಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ