ಉಡುಪಿ: ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್ ಹಾಗೂ ಚರಸ್ ಸಾಗಾಟ ಮಾಡತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಲಕ್ಷಾಂತರ ಮೌಲ್ಯದ ಸುತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬ್ರಹ್ಮಾವರದ ಉಪ್ಪೂರು ನಿವಾಸಿ, ನಾಗರಾಜ್ (25) ಬಂಧಿತ ಆರೋಪಿ. ಆರೋಪಿ ನಾಗರಾಜ್ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಬೀಡನಗುಡ್ಡೆಯ ಮಹಾತ್ಮಾ ಗಾಂಧಿ ಬಯಲು ರಂಗಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮೋಟಾರು ಬೈಕ್‌ನಲ್ಲಿ ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಪೌಡರ್ ಹಾಗೂ ಚರಾಸ್ ಮಾರಾಟ ಮಾಡುವ ಉದ್ದೇಶ ಹೊಂದಿದ್ದ ಎಂದು ತಿಳಿದು ಬಂದಿದೆ.ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
