ನವದೆಹಲಿ: ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗುರುವಾರ ಅನೇಕ ವರದಿಗಳು ತಿಳಿಸಿವೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಮಗ್ರ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರವು ಸೆಪ್ಟೆಂಬರ್‌ನಲ್ಲಿ ಈ ವಿಷಯದ ಕುರಿತು ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಅನುಮೋದಿಸಿತ್ತು.

































