ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಶಿವನ ನೆನೆದಡೆ ಭವ ಹಿಂಗೂದೆಂಬ
ವಿವರಗೇಡಿಗಳ ಮಾತ ಕೇಳಲಾಗದು.
ಹೇಳದಿರಯ್ಯಾ, ಜ್ಯೋತಿಯ ನೆನೆದಡೆ ಕತ್ತಲೆ ಕೆಡುವುದೆ?
ಇಷ್ಟಾನ್ನವ ನೆನೆದಡೆ ಹೊಟ್ಟೆ ತುಂಬುವುದೆ?
ರಂಭೆಯ ನೆನೆದಡೆ ಕಾಮದ ಕಳವಳವಡಗುವುದೆ ಅಯ್ಯಾ?
ನೆನೆದರಾಗದು, ನಿಜದಲ್ಲಿ ನಿರ್ಧರಿಸಿ ತಾನು ತಾನಾಗದನ್ನಕ್ಕರ,ಸದ್ಗುರು ಸಿದ್ಧಸೋಮನಾಥಲಿಂಗನ ನೆನೆಯಬಾರದು.
-ಅಮುಗಿದೇವಯ್ಯ































