ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬಸವಣ್ಣ ಮತ್ರ್ಯಲೋಕಕ್ಕೆ ಬಂದು ಮಹಾಮನೆಯ ಕಟ್ಟಿ,
ಭಕ್ತಿಜ್ಞಾನವೆಂಬ ಜ್ಯೋತಿಯನೆತ್ತಿ ತೋರಲು
ಸುಜ್ಞಾನವೆಂಬ ಪ್ರಭೆ ಪಸರಿಸಿತಯ್ಯಾ ಜಗದೊಳಗೆ.
ಬೆಳಗಿನೊಳು ತಿಳಿದು ನೋಡಿ ಹರೆದಿದ್ದ ಶಿವಗಣಂಗಳೆಲ್ಲ ನೆರೆದು ಕೂಡಿತಯ್ಯಾ.
ಕೂಡಲಚೆನ್ನಸಂಗಮದೇವಾ ನಿಮ್ಮ ಶರಣ ಬಸವಣ್ಣನ ಕೃಪೆಯಿಂದ
ಪ್ರಭುದೇವರ ನಿಜವನರಿದು ನಿಶ್ಚಿಂತರಾದರಯ್ಯಾ ಶಿವಗಣಂಗಳೆಲ್ಲರು
-ಚೆನ್ನಬಸವಣ್ಣ
































