ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹಿರಿಯತನಕ್ಕೆ ಹೆಣ್ಣೆಂದು ಕರೆದರೆ
ಆ ಹೆಣ್ಣುರೂಪಾದ ನಾಮವು ನಿರ್ನಾಮವಯ್ಯ.
ಅರಿವನರಿದು ಅಪ್ರತಿಮ ಘನವ ಕಂಡುಳಿದು
ಹೆಣ್ಣುತನದ ಮಾತನಳಿದು
ಏಕೋದೇವನ ಕೃಪೆಯನು ಕಂಡು ಬದುಕಿದೆನಯ್ಯ ಸಂಗಯ್ಯ.
-ನೀಲಮ್ಮ

































