ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ತೂಬರದ ಕೊಳ್ಳಿಯಂತೆ ಉರಿವಾತ ಭಕ್ತನೆ ?
ಹುಸಿದು ತಂದು ಮಾಡುವಾತ ಭಕ್ತನೆ ?
ಭಕ್ತರ ಕುಲವನೆತ್ತಿ ನಿಂದಿಸುವಾತ ಭಕ್ತನೆ ?
ನಿಂದಯಾ ಶಿವಭಕ್ತಾನಾಂ ಕೋಟಿ ಜನ್ಮನಿ ಸೂಕರಃ |
ಸಪ್ತಜನ್ಮನಿ ಭವೇತ್ ಕುಷ್ಠೀ ದಾಸೀಗರ್ಭೇಷು ಜಾಯತೇ ||’
ಎಂದುದಾಗಿ, ತನ್ನ ಪ್ರಾಣದ ಮೇಲೆ ಬಂದಡೂ ಬರಲಿ, ಇವರ ಬಿಡಬೇಕು.ಬಿಡದಿರಲು ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.
-ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ





























