ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ಉಚ್ಛಾಟನೆ.!

WhatsApp
Telegram
Facebook
Twitter
LinkedIn

 

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಉಚ್ಛಾಟನೆ ಮಾಡಲಾಗಿದ್ದು, ಶ್ರೀಗಳ ಉಚ್ಛಾಟನೆಗೆ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೆಡೆ ಮಠದ ಆವರಣದಲ್ಲಿ ಭಾರಿ ಹೈಡ್ರಾಮಾ ನಡೆದಿದ್ದು, ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಉಚ್ಛಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಚನಾನಂದ ಶ್ರೀಗಳು, ನನ್ನ ಉಚ್ಛಾಟನೆ ಹಾಸ್ಯಾಸ್ಪದ. ಟ್ರಸ್ಟ್​ನವರಿಗೆ ಲೆಕ್ಕ ಕೇಳಿದ್ದಕ್ಕೆ ಟಾರ್ಗೆಟ್​ ಮಾಡುತ್ತಿದ್ದಾರೆ. ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಶ್ವಾಸಪೀಠದಿಂದಲೇ ನನ್ನನ್ನು ಸಮಾಜ ಗುರುತಿಸಿದೆ. ಶ್ವಾಸಪೀಠ ಹಾಗೂ ನನ್ನ ಹೆಸರಿನಲ್ಲಿ ಒಂದು ಇಂಚು ಭೂಮಿ ಇಲ್ಲ. ಪೀಠಾಧ್ಯಕ್ಷರಾದ ಬಳಿಕ ಪೂರ್ವಶ್ರಮಕ್ಕೆ ಒಮ್ಮೆಯೂ ಭೇಟಿ ನೀಡಿಲ್ಲ. ನಾನು ಯಾವುದೇ ನಿಯಮವನ್ನೂ ಮೀರಿಲ್ಲ. ನಾನು ಲಕ್ಷಾಂತರ ಭಕ್ತರಿಗೆ ಉತ್ತರಿಸಬೇಕು, ಈ 12 ಜನರಿಗೆ ಉತ್ತರಿಸಲ್ಲ. ಟ್ರಸ್ಟ್​ನ ಸದಸ್ಯರು ಕೋಟ್ಯಂತರ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ತಮ್ಮ ಅವ್ಯವಹಾರ ಮುಚ್ಚಿ ಹಾಕಿಕೊಳ್ಳಲು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. 2008ರಿಂದಲೂ ಪಂಚಮಸಾಲಿ ಗುರುಪೀಠದ ಲೆಕ್ಕವನ್ನು ಕೊಟ್ಟಿಲ್ಲ. ಲೆಕ್ಕ ಕೇಳಿದ್ದಕ್ಕೆ ಈಗ ಷಡ್ಯಂತ್ರ ನಡೆಸಿ ನನ್ನನ್ನು ಉಚ್ಛಾಟನೆ ಮಾಡಿದ್ದಾರೆ ಎಂದರು.

ಇನ್ನು ಈ ವಿಚಾರವಾಗಿ ಕಾನೂನು ಹೋರಾಟದ ಬಗ್ಗೆ ಭಕ್ತರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon