ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಹೆಣಗಾಡುತ್ತಿದ್ದ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೊನೆಗೂ ನೆಮ್ಮದಿಯ ಸುದ್ದಿ ನೀಡಿದೆ.
ಹೌದು, ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯಂತೆ ಅರ್ಜಿ ಸಲ್ಲಿಕೆಯ ಕೊನೆಯ ದಿನ ಇಂದೇ ಆಗಿತ್ತು.
ಆದರೆ ಸರ್ವರ್ ಸಮಸ್ಯೆ ಪರಿಣಾಮ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಮೇ 15ರವರೆಗೆ ವಿಸ್ತರಣೆ ಮಾಡಿರುವುದಾಗಿ ಪ್ರಕಟಣೆ ಹೊರಡಿಸಿದೆ.