ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಮತ್ತೊಂದು ಪಂದ್ಯದಲ್ಲಿ ಟೀಮ್ ಇಂಡಿಯಾ ಮುಖಾಉಖಿಯಾಗಲು ಸಜ್ಜಾಗಿದೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸರಣಿಯನ್ನು ಸಮಬಲಗೊಳಸಿಲು ಈ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು ಅಗತ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಆಡಿದ ಬಳಗದೊಂದಿಗೆ ಕಣಕಕ್ಇಳಿಯಲಿದೆಯಾ ಅಥವಾ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.
ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಯುವ ಆಟಗಾರ ಯಸಸ್ವಿ ಜೈಸ್ವಾಲ್ಗೆ ಟೀಮ್ ಇಂಡಿಯಾದ ಟಿ20 ತಂಡದಲ್ಲಿ ಅವಕಾಶ ನೀಡಿ ಎಂದು ಒತ್ತಾಯಿಸಿದ್ದಾರೆ. ಮೊದಲ ಪಂದ್ಯದಲ್ಲಿ ಬೆಂಚ್ ಕಾದಿದ್ದ ಜಯಸ್ವಾಲ್ಗೆ ಎರಡನೆ ಪಂದ್ಯದಲ್ಲಿ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅಂದಹಾಗೆ ವಾಸಿಂ ಜಾಫರ್ ಎರಡೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಬದಲಿಗೆ ತಂಡದಲ್ಲಿ ಯಶಸ್ವಿ ಜೈಸ್ವಾಲ್ಗೆ ಅವಕಾಶ ನಿಡಬೇಕು ಎಂದು ಒತ್ತಾಯಸಿದರು. ಏಕದಿನ ಸರಣಿಯಲ್ಲಿ ಇಶಾನ್ ಕಿಶನ್ ಅದ್ಭುತ ಪ್ರದರ್ಶನ ನೀಡಿದ್ದರು ಕೂಡ ಟಿ20 ಮಾದರಿಯಲ್ಲಿ ಅವರ ಪ್ರದರ್ಶನ ಗಮನಾರ್ಹವಾಗಿಲ್ಲ ಎಂಬುದನ್ನು ಜಾಫರ್ ಬೊಟ್ಟು ಮಾಡಿದ್ದು ಆ ಸ್ಥಾನದಲ್ಲಿ ಜೈಸ್ವಾಲ್ಗೆ ಅವಕಾಶ ನಿಡಬೇಕು ಎಂದು ಒತ್ತಾಯಿಸಿದ್ದಾರೆ.