ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು.
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಆರು ದಶಕಗಳ ವೃತ್ತಿಜೀವನದಲ್ಲಿ ಧರ್ಮೇಂದ್ರ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ.
1960ರಲ್ಲಿ ʻದಿಲ್ ಭೀ ತೇರಾ ಹಮ್ ಭೀ ತೇರೆʼ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಪ್ರಾರಂಭವಾಗಿ ಬಂದಿನಿ , ಅನುಪಮಾ, ಶೋಲೆ, ಚುಪ್ಕೆ ಚುಪ್ಕೆ, ಮೇರಾ ಗಾಂವ್ ಮೇರಾ ದೇಶ್ ಮತ್ತು ಡ್ರೀಮ್ ಗರ್ಲ್ ಸೇರಿದಂತೆ ಹಲವುಗಳಲ್ಲಿ ಸಿನಿಮಾಗಳಲ್ಲಿ ನಟಿಸಿದ್ದಾರೆ.
2025ರ ಆರಂಭದಲ್ಲಿ ಧರ್ಮೇಂದ್ರ ಅವರು ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟನೆಯ ʻತೇರಿ ಬಾತೋ ಮೇ ಐಸಾ ಉಲ್ಜಾ ಜಿಯಾʼ ಸಿನಿಮಾದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು
































