ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ಪತ್ರಕರ್ತ N S ಶಂಕರ್(67) ನಿಧನರಾಗಿದ್ದಾರೆ.! ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಲಗಿದ್ದಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.
‘ಉಲ್ಟಾ ಪಲ್ಟಾ’ದಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದ ಶಂಕರ್, ‘ಪ್ರಜಾವಾಣಿ’, ‘ಮುಂಗಾರು’ ಮುಂತಾದ ಮಾಧ್ಯಮಗಳಲ್ಲಿಯೂ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ಚಿತ್ರರಂಗ ಮತ್ತು ಪತ್ರಕರ್ತರ ಸಂಘ ತೀವ್ರ ಸಂತಾಪ ಸೂಚಿಸಿದೆ. ಇವರು ಪತ್ರಕರ್ತರಾಗಿ, ನಂತರ ನಿರ್ದೇಶಕರಾಗಿ ಯಶಸ್ಸು ಕಂಡಿದ್ದರು.
































