ಮಂಗಳೂರು: ಜಮ್ಮು ಕಾಶ್ಮೀರ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡನೆ, ಉಗ್ರದ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರ ನೀಡಿ ಏಂದು ಕೇಂದ್ರ ಸರ್ಕಾರಕ್ಕೆ VHP ಆಗ್ರಹಿಸಿದೆ.
ಜಮ್ಮು ಕಾಶ್ಮೀರದ ಖ್ಯಾತ ಪ್ರವಾಸಿ ತಾಣವಾದ ಪಹಲ್ಗಾಮ್ ನಲ್ಲಿ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು. ಈ ಘಟನೆಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 30 ಮಂದಿ ಮೃತಪಟ್ಟಿದ್ದಾರೆ, ಹಿಂದೂಗಳು ಎಂದು ಖಾತ್ರಿಪಡಿಸಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ.
ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಭಾವಪೂರ್ವಕ ಶೃದ್ಧಾಂಜಲಿಯನ್ನು ವಿಶ್ವ ಹಿಂದೂ ಪರಿಷದ್ ಸಮಪರ್ಪಿಸುತ್ತದೆ ಅಲ್ಲದೆ ಉಗ್ರರ ದಾಳಿಯಲ್ಲಿ ಗಾಯಗೊಂಡವರು ಅತೀಶೀಘ್ರವಾಗಿ ಗುಣಮುಖವಾಗುವಂತೆ ಶ್ರೀದೇವರಲ್ಲಿ ಪ್ರಾರ್ಥಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಅಲ್ಲಿನ ಭಯೋತ್ಪಾದಕರ ನುಸುಳುಕೋರರ ಹಾವಳಿ ತಡೆಗಟ್ಟಲು ಮತ್ತು ಪ್ರತ್ಯೇಕವಾದಕೊಸ್ಕರ ನಡೆಯುವ ಕೃತ್ಯವನ್ನು ಸಂಪೂರ್ಣ ತೊಡೆದುಹಾಕಲು ಕೇಂದ್ರ ಸರಕಾರ ಇನ್ನಷ್ಟು ಕ್ರಮಕೈಗೊಳ್ಳಬೇಕು, ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡುವುದರ ಜೊತೆಗೆ ಕೇಂದ್ರ ಸರ್ಕಾರ ಉಗ್ರದ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕೆಂದು ವಿಶ್ವ ಹಿಂದೂ ಪರಿಷದ್ ಆಗ್ರಹಿಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ ಹೇಳಿದ್ದಾರೆ.