‘ಅಂಗನವಾಡಿ ಕಾರ್ಯಕರ್ತೆಯರ ಅಹವಾಲು ಆಲಿಸದ ಕಾಂಗ್ರೆಸ್ ನಡೆ ಬೇಜವಾಬ್ದಾರಿತನದ ಪರಮಾವಧಿ’- ವಿಜಯೇಂದ್ರ

WhatsApp
Telegram
Facebook
Twitter
LinkedIn

ಬೆಂಗಳೂರು : ರಾಜ್ಯದಲ್ಲಿ ಗೌರವಧನ ನೆಚ್ಚಿಕೊಂಡೇ ಜೀವನ ಸಾಗಿಸುತ್ತಿರುವ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಸಿಬ್ಬಂದಿಗಳು ವೇತನ ಹೆಚ್ಚಳ, ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊರೆವ ಚಳಿಯನ್ನೂ ಲೆಕ್ಕಿಸದೆ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಅವರ ಅಹವಾಲು ಆಲಿಸದ ಕಾಂಗ್ರೆಸ್ ಸರ್ಕಾರದ ನಡೆ ಬೇಜವಾಬ್ದಾರಿತನದ ಪರಮಾವಧಿಯಲ್ಲದೇ ಬೇರೇನೂ ಅಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಬಳದ ಜೊತೆ ಪ್ರೋತ್ಸಾಹ ಧನ ವಿತರಣೆ ಯಲ್ಲೂ ವಿಳಂಬ ಧೋರಣೆ ಅನುಸರಿಸಿ ಲಕ್ಷಾಂತರ ಸಿಬ್ಬಂದಿಗಳನ್ನು ಸಂಕಷ್ಟಕ್ಕೆ ತಳ್ಳಿದ್ದ ಈ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸುವಲ್ಲಿಯೂ ಸಂಪೂರ್ಣ ವಿಫಲವಾಗಿ ವಚನ ಭ್ರಷ್ಟತೆಯ ಹಣೆಪಟ್ಟಿ ಅಂಟಿಸಿಕೊಂಡಿದೆ. ಇನ್ನಾದರೂ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಕೂಡಲೇ ಆ ಶ್ರಮಿಕ ಕಾರ್ಯಕರ್ತೆಯರಿಗೆ ಸಂಬಳ, ಭತ್ಯೆ ಹಾಗೂ ಇನ್ನಿತರೆ ಸವಲತ್ತುಗಳನ್ನು ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸುವೆ ಎಂದು ಬರೆದುಕೊಂಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon