ಹಾಸನ: ಹೌದು ಮೊನ್ನೆ ಹಾಸನದಲ್ಲಿ ನಂದಿನಿ ಹಾಲಿನ ಉತ್ಪನ್ನಗಳನ್ನು ಖರೀದಿಸಿ, ಹಂಚಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಬಿಸಿ ತಟ್ಟಿದೆ.
ಸಾರ್ವಜನಿಕ ದೂರು ವಿಭಾಗದ ರಾಜ್ಯ ನೋಡಲ್ ಅಧಿಕಾರಿಯಿಂದ ಹಾಸನ ಜಿಲ್ಲಾ ಎಂಸಿಎಂಸಿ ತಂಡಕ್ಕೆ ಈ ಬಗ್ಗೆ ನಿರ್ದೇಶನ ನೀಡಲಾಗಿದೆ.
ಹಾಲು ಖರೀದಿ ಮಾಡಿ ಹಂಚಿರುವಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆಯೇ ಎಂದು ಪರಿಶೀಲಿಸಲು ನಿರ್ದೇಶನ ನೀಡಲಾಗಿದೆ. ನಂತರ ವರದಿಯನ್ನು ಆಧರಿಸಿ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.