ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 14 ವರ್ಷಗಳ ಟೆಸ್ಟ್ ಕ್ರಿಕೆಟ್ ಜರ್ನಿಗೆ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ತಮ್ಮ ಇನ್ಸ್ಟಾ ಖಾತೆಯಲ್ಲಿ ಭಾವುಕ ಪೋಸ್ಟ್ವೊಂದನ್ನ ಹಂಚಿಕೊಂಡಿರುವ ಅವರು, “ನಾನು ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಪ್ರಯಾಣವು ನನ್ನನ್ನು ಇಷ್ಟು ದೊಡ್ಡ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ ಅಂತ ಎಂದಿಗೂ ಊಹಿಸಿರಲಿಲ್ಲ. ಅದು ನನ್ನನ್ನು ಪರೀಕ್ಷಿಸಿತು, ನನ್ನನ್ನು ರೂಪಿಸಿತು ಮತ್ತು ನನಗೆ ಪಾಠಗಳನ್ನು ಕಲಿಸಿತು. ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ಸಂತೋಷದಿಂದ ನೋಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.
“ನಾನು ಈ ಸ್ವರೂಪದ ದೂರ ಸರಿಯುವುದು ಸುಲಭದ ಮಾತಲ್ಲ, ಆದ್ರೆ ಇದು ಸೂಕ್ತ ಸಮಯ. ಟೆಸ್ಟ್ ಗಾಗಿ ನಾನು ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ. ಹಾಗಾಗಿ ನಿರೀಕ್ಷೆಗಿಂತ ಹೆಚ್ಚಿನದ್ದನ್ನು ಅದು ನನಗೆ ಹಿಂತಿರುಗಿಸಿದೆ. ನಾನು ಜನರಿಗಾಗಿ ಮೈದಾನಕ್ಕಿಳಿದಾಗ ದಾರಿಯುದ್ದಕ್ಕೂ ನನ್ನನ್ನು ನೋಡುವಂತೆ ಮಾಡಿದ ಪ್ರತಿಯೊಬ್ಬ ಅಭಿಮಾನಿಗಳು ಕೃತಜ್ಞತೆ ಸಲ್ಲಿಸುತ್ತೇನೆ. ನಾನು ಹೊರಡುತ್ತಿದ್ದೇನೆ” ಎಂದು ಭಾವುಕರಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ.