ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ನಡೆದ ಮೂರು ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಆರ್‌ಸಿಬಿ ಸೋಷಿಯಲ್ ಮೀಡಿಯಾ ಪೇಜ್ ಮೂಲಕ ಭಾವುಕ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದಾರೆ.
ಜೂನ್.4ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಘಾತಕಾರಿಯಾಗಿರುವಂತಹ ಘಟನೆ ನಡೆದಿದ್ದು, ಇದೊಂದು ಬಹಳ ಹೃದಯವಿದ್ರಾಹಕ ಘಟನೆಯಾಗಿದೆ. ಆ ದಿನ ನಿಜವಾಗಿಯೂ ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ತುಂಬಾ ಸಂತೋಷವಾಗಿರಬೇಕಾದ ದಿನವಾಗಿರಬೇಕಾಗಿತ್ತು. ಆದರೆ ಆ ದಿನವು ಬಹಳ ದುರಂತದ ದಿನವಾಗಿ ಮಾರ್ಪಟ್ಟಿದೆ. ದುರಂತದಲ್ಲಿ ಮಕ್ಕಳನ್ನ ಕಳೆದುಕೊಂಡ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ಒಟ್ಟಾಗಿ ನಾವು ಎಚ್ಚರಿಕೆಯಿಂದ, ಗೌರವದಿಂದ ಹಾಗೂ ಜವಾಬ್ದಾರಿಯಿಂದ ಮುಂದುವರಿಯುತ್ತೇವೆ ಎಂದು ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವೆಬ್‌ಸೈಟ್ ಮೂಲಕ ಹೇಳಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಳೆದ ಜೂನ್.4ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.