Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು

0

 

ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 83.18 ಟಿ.ಎಂ.ಸಿ ನೀರು ಸಂಗ್ರಹ ಇದ್ದು, ಒಳ ಹರಿವು 21,492 ಕ್ಯೂಸೆಕ್ಸ್ ಇರುತ್ತದೆ. ಜಲಾಶಯದ ನೀರಿನ ಲಭ್ಯತೆಯನ್ನು ಆಧರಿಸಿ, ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ವೇಳಾ ಪಟ್ಟಿಯಂತೆ ಕಾಲುವೆವಾರು ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.

ವೇಳಾಪಟ್ಟಿ:

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ: ಆ.03 ರಿಂದ ಸರಾಸರಿ 3000 ಕ್ಯೂಸೆಕ್ ನಂತೆ (ಕುಡಿಯುವ ನೀರಿಗಾಗಿ ಗಣೇಕಲ್ ಜಲಾಶಯ ತುಂಬುವವರೆಗೆ) ಅಥವಾ ಕಾಲುವೆಯಡಿ ಲಭ್ಯತೆ ಇರುವವರೆಗೆ. ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ: ಆ.03 ರಿಂದ ಸರಾಸರಿ 1200 ಕ್ಯೂಸೆಕ್ಸ್‍ನಂತೆ  ಅಥವಾ ಕಾಲುವೆಯಡಿ ಲಭ್ಯತೆ ಇರುವವರೆಗೆ. ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ: ಆ.03 ರಿಂದ ಸರಾಸರಿ 650 ಕ್ಯೂಸೆಕ್ಸ್‍ನಂತೆ  ಅಥವಾ ಕಾಲುವೆಯಡಿ ಲಭ್ಯತೆ ಇರುವವರೆಗೆ. ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ರಾಯ ಬಸವಣ್ಣ ಕಾಲುವೆ: ಜೂ.01 ರಿಂದ ಸರಾಸರಿ 250 ಕ್ಯೂಸೆಕ್ಸ್ ಅಥವಾ ಈ ಕಾಲುವೆಯಡಿ ನೀರು ಲಭ್ಯವಿರುವವರೆಗೆ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ: ಆ.03 ರಿಂದ ಸರಾಸರಿ 25 ಕ್ಯೂಸೆಕ್ಸ್‍ನಂತೆ ಅಥವಾ ಕಾಲುವೆಯಡಿ ಲಭ್ಯತೆ ಇರುವವರೆಗೆ. ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ರೈತಭಾಂದವರಲ್ಲಿ ಮನವಿ:

ರೈತ ಭಾಂಧವರು ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗದಿ ಪಡಿಸಿದ ಬೆಳೆಗಳನ್ನು ಮಾತ್ರ ಬೆಳೆಯಬೇಕು. ಬೆಳೆ ಉಲ್ಲಂಘನೆ ಮಾಡುವುದು, ಕಾಲುವೆ ಜಾಲದ ಗೇಟ್‍ಗಳನ್ನು ಹಾನಿ ಮಾಡುವುದು, ಎಸ್ಕೇಪ್‍ಗಳ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಸೈಫನ್‍ಗಳ ಮೂಲಕ ಪಂಪ್ ಸೆಟ್‍ಗಳ ಮೂಲಕ ಮತ್ತು ನಿರ್ಮಿಸಿರುವ ಬಾವಿಗಳ ಮೂಲಕ ನೀರು ಕೊಂಡೊಯುವುದನ್ನು ಹಾಗೂ ಅನಧಿಕೃತ ಬೆಳೆ ಬೆಳೆಯುವುದನ್ನು ನಿಷೇಧಿಸಲಾಗಿದೆ.     ಒಂದು ವೇಳೆ ಉಲ್ಲಂಘನೆ ಮಾಡಿದಲ್ಲಿ ಅವರ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗುವುದು. ರೈತ ಬಾಂಧವರು ಸಮರ್ಪಕ ನೀರು ನಿರ್ವಹಣೆಗೆ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.