ಕೋಲ್ಕತ್ತ : ಪಶ್ಚಿಮ ಬಂಗಾಳ ಸರ್ಕಾರ ಅಲ್ಪಸಂಖ್ಯಾತರ ಪರವಾಗಿ ನಿಂತಿದೆ. ರಾಜ್ಯದಲ್ಲಿ ಯಾರೂ ಉದ್ವಿಗ್ನತೆಯನ್ನು ಉಂಟುಮಾಡಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಇಲ್ಲಿನ ರೆಡ್ ರೋಡ್‌ನಲ್ಲಿ ಈದ್ ಪ್ರಾರ್ಥನೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡಲಾಗುತ್ತಿದೆ. ಆದರೆ ದಯವಿಟ್ಟು ಯಾರೂ ಇವರ ಈ ಬಲೆಯಲ್ಲಿ ಸಿಲುಕಿಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿಗೆ ಅಲ್ಪಸಂಖ್ಯಾತರ ಬಗ್ಗೆ ಸಮಸ್ಯೆಯಾದರೆ, ಅವರು ದೇಶದ ಸಂವಿಧಾನವನ್ನು ಬದಲಾಯಿಸುತ್ತಾರೆಯೇ? ಜನರನ್ನು ವಿಭಜಿಸುವ ಗುರಿಯನ್ನು ಹೊಂದಿರುವ ಬಿಜೆಪಿ ‘ಜುಮ್ಲಾ ರಾಜಕೀಯ’ ಮಾಡುತ್ತಿದೆ ಎಂದಿದ್ದಾರೆ.