ದಾವಣಗೆರೆ: ದೇಶ ನನಗೇನು ಕೊಡ್ತು ಅಲ್ಲ, ನಾನು ದೇಶಕ್ಕಾಗಿ ನನ್ನ ಕರ್ತವ್ಯವೇನು ಎಂದು ಯುವಕರು ಅರಿತುಕೊಳ್ಳಬೇಕು. ಅನೇಕ ಶಕ್ತಿಗಳು ಧರ್ಮ ಹಾಗೂ ಜಾತಿ ಹೆಸರಿನಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿವೆ. ಯಾವ ಧರ್ಮಕ್ಕೂ ವಿಶೇಷ ಸ್ಥಾನಮಾನ ಇಲ್ಲ, ಎಲ್ಲರಿಗೂ ಸಂವಿಧಾನ ಒಂದೇ, ಆದ್ದರಿಂದ ಸಂವಿಧಾನ ರಕ್ಷಿಸುವ ಕೆಲಸ ಯುವಕರು ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಯುವಜನತೆಗೆ ಕರೆ ನೀಡಿದರು.
ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಬಾಪೂಜಿ ಎಂಬಿಎ ಮೈದಾನದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ನಗಾರಿ ಬಾರಿಸಿ ಹಾಗೂ ಹೊಂಬಾಳೆ ಬಿಡಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಇಂದು ಎಲ್ಲರೂ ಶಿಕ್ಷಣ ಪಡೆದು ಉದ್ಯೋಗ ಗಳಿಸಿ, ಗೌರವ ಮತ್ತು ಸಮಾನತೆಯಿಂದ ಬಾಳಲು ಸಾಧ್ಯವಾಗಿದೆ. ಸಂವಿಧಾನ ಇದ್ದುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಸಂವಿಧಾನ ರಕ್ಷಿಸಿ, ಉಳಿಸುವುದು ನಮ್ಮಲ್ಲರ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವ ಒಪ್ಪಿ ದೇಶದಲ್ಲಿ ಆಡಳಿತ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ, ಎಲ್ಲಾ ವ್ಯಕ್ತಿಗಳಿಗೆ ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕ ಸಮಾನತೆ ದೊರಕಬೇಕು ಎಂಬುವುದು ಡಾ.ಅಂಬೇಡ್ಕರ್ ಆಶಯವಾಗಿತ್ತು ಎಂದರು.
ಸಂವಿಧಾನ ಈ ಸಾರ ಪ್ರತಿಯೊಬ್ಬರಿಗೂ ಅರ್ಥವಾಗಬೇಕು. ಇದರ ಹಿನ್ನಲೆಯಲ್ಲಿ ಸರ್ಕಾರ ಪ್ರತಿ ಶಾಲೆಯಲ್ಲಿ ಸಂವಿಧಾನ ಓದು ಕಾರ್ಯಕ್ರಮ ಜಾರಿ ಮಾಡಿದೆ. ಮಕ್ಕಳಿಗೆ ಸಂವಿಧಾನದ ಪೀಠಿಕೆ ಬಗ್ಗೆ ಪರಿಚಯ ಮಾಡಿಕೊಡಲಾಗುತ್ತಿದೆ. ಅಂಬೇಡ್ಕರ್ ಅವರ ಆರ್ಥಿಕ ಸಮಾನತೆಯ ಆಶಯವನ್ನು ಈಡೇರಿಸುವ ದೃಷ್ಟಿಯಿಂದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳಿದರು.
ದೇಶದಲ್ಲಿ ಶೇ.35 ರಷ್ಟು ಯುವ ಜನರಿದ್ದಾರೆ, ಯುವಜನರೇ ನಮ್ಮ ದೇಶದ ಆಸ್ತಿ. ಪ್ರತಿಯೊಬ್ಬ ಯುವಕ, ಯವತಿ ಸಮಾಜಮುಖಿ ಮನೋಭಾವ ಬೆಳಸಿಕೊಳ್ಳಬೇಕು. ವಿವಿಧ ಭಾμÉ, ಧರ್ಮ, ಸಂಸ್ಕøತಿ ಇವರುವುದರಿಂದ ವೀದ್ಯಾರ್ಥಿಗಳಿಗೆ ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣ ಅತ್ಯಗತ್ಯವಾಗಿದೆ. ಯುವಜನರು ದೇಶವನ್ನು ಮುಂದೆ ಕೊಂಡೊಯ್ಯಲು ಹಾಗೂ ಬದಲಾವಣೆ ತರುವ ಪ್ರಯತ್ನ ಮಾಡಬೇಕು.
ಭವಿಷ್ಯ ನಿರ್ಮಾಣ ಮಾಡುವವರು ಯುವಜನರು, ಇದನ್ನು ಮನಗಂಡಿದ್ದ ಸ್ವಾಮಿ ವಿವೇಕಾನಂದರು ‘ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂದು ಯುವ ಜನರಿಗೆ ಕರೆ ನೀಡಿದರು. ಯುವಕರಿಗೆ ಜೀವನದಲ್ಲಿ ಗುರಿ ಇರಬೇಕು. ಇದನ್ನು ಸಾಧಿಸಲು ಪರಿಶ್ರಮ ಪಡಬೇಕು. ಆಗ ಮಾತ್ರ ಗುರಿ ಸಾಧನೆ ಮಾಡಬಹುದು. ಯುವ ಜನತೆ ದೇಶಕ್ಕೆ ಸಂಪತ್ತಾಗಬೇಕು, ಹೊರೆಯಾಗಬಾರದು. ರಾಜ್ಯದಲ್ಲಿ 1.62 ಲಕ್ಷ ಯವಕ ಯುವತಿಯರಿಗೆ ಯುವನಿಧಿ ಯೋಜನೆಯಡಿ ರೂ.216 ಕೋಟಿ ನಿರುದ್ಯೋಗ ಭತ್ಯೆಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಇದರೊಂದಿಗೆ ಯುವ ಜನರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಪ್ರಭಾ ಮಲ್ಲಿಕಾರ್ಜುನ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಸವರಾಜು ವಿ ಶಿವಗಂಗಾ, ಬಿ.ದೇವೇಂದ್ರಪ್ಪ, ಬಿ.ಪಿ.ಹರೀಶ್, ಶಾಂತನಗೌಡ.ಡಿ.ಜಿ. ವಿಧಾನ ಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್.ಕೆ, ರಾಜ್ಯ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ್ ನಾಯ್ಕ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿ ರಂದೀಪ್.ಡಿ, ಪೆÇಲೀಸ್ ಉಪ ಮಹಾನಿರೀಕ್ಷಕ ರಮೇಶ್.ಬಿ, ಜಿಲ್ಲಾ ಪಂಚಾಯಿತಿ ಸಿಇಓ ಸುರೇಶ್ ಮಾಜಿ ಸಚಿವ ಹೆಚ್.ಆಂಜನೇಯ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ಸ್ವಾಗತಿಸಿದರು. ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ. ವಂದಿಸಿದರು.