ಮುಂಬೈ: ಮೂರನೇ ಬಾರಿಗೆ ಮಹಾರಾಷ್ಟ್ರ ಸಿಎಂ ಆಗಲಿರುವ ದೇವೇಂದ್ರ ಫಡ್ನವೀಸ್ ಅವರು ತಮ್ಮ ಇತ್ತೀಚಿನ ಚುನಾವಣಾ ಅಫಿಡವಿಟ್‌ನಲ್ಲಿ 5.25 ಕೋಟಿ ರೂಪಾಯಿ ನಿವ್ವಳ ಆಸ್ತಿ ಮೌಲ್ಯವನ್ನು ಘೋಷಿಸಿದ್ದಾರೆ. 2019ರಲ್ಲಿ 3.86 ಕೋಟಿಗೆ ಏರಿಕೆಯಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ದೇವೇಂದ್ರ ಫಡ್ನವೀಸ್ ಅವರು 56.07 ಲಕ್ಷ ರೂಪಾಯಿ ಮೌಲ್ಯದ ಚರ ಆಸ್ತಿ ಮತ್ತು 4.69 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿ ಹೊಂದಿದ್ದಾರೆ. 32.85 ಲಕ್ಷ ರೂಪಾಯಿ ಮೌಲ್ಯದ 450 ಗ್ರಾಂ ಚಿನ್ನಾಭರಣ ಹೊಂದಿದ್ದಾರೆ ಎಂದು ವರದಿಗಳು ತಿಳಿಸಿವೆ.
