ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಬೆಳೆ ಖರೀದಿಸಲು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ ರೂ. 7,721/- ದರವನ್ನು ನಿಗದಿಪಡಿಸಲಾಗಿದೆ. ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಕೆ.ಒ.ಎಫ್), ಚಿತ್ರದುರ್ಗ ಇವರಿಂದ ಖರೀದಿ ಪ್ರಕ್ರಿಯೆ ನಡೆಯಲಿದೆ. ನೋಂದಣಿಗೆ 50 ದಿನಗಳು ಹಾಗೂ ಖರೀದಿ ಪ್ರಕ್ರಿಯೆಗೆ 60 ದಿನಗಳ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಾಲ್ ನಂತೆ, ಗರಿಷ್ಠ 20 ಕ್ವಿಂಟಾಲ್ ವರೆಗೆ ಸೂರ್ಯಕಾಂತಿಯನ್ನು ಖರೀದಿಸಲಾಗುವುದು. ಚಿತ್ರದುರ್ಗದ ಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರವು ಕಾರ್ಯನಿರ್ವಹಿಸಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಥವಾ ಮಾರಾಟ ಪ್ರಕ್ರಿಯೆಗಾಗಿ ಖರೀದಿ ಕೆ.ಓ.ಎಫ್. ಅಧಿಕಾರಿ ಅಯ್ಯಪ್ಪ ಡಂಬಳ ದೂರವಾಣಿ ಸಂಖ್ಯೆ: 6366975386 ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.






























