ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2019ರ ಫೆಬ್ರವರಿ 24ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಅರ್ಹ ರೈತರು ವಾರ್ಷಿಕವಾಗಿ 6,000 ರೂ.ಗಳನ್ನು ಮೂರು ಸಮಾನ ಕಂತುಗಳಲ್ಲಿ 2 ಸಾವಿರ ರೂ. ಗಳಂತೆ ನೀಡಲಾಗುತ್ತದೆ. ಸದ್ಯ ಈ ಯೋಜನೆಯ ಅನುಗುಣವಾಗಿ ಈ ವರೆಗೆ 18 ಕಂತು ಜಾರಿಯಾಗಿದ್ದು, ಸರ್ಕಾರವು 2024ರ ಅಕ್ಟೋಬರ್ 5ರಂದು ಬಿಡುಗಡೆ ಮಾಡಿತು. ಫಲಾನುಭವಿಗಳು ಈಗ ಯೋಜನೆಯ 19 ನೇ ಕಂತಿಗಾಗಿ ಕಾಯುತ್ತಿದ್ದಾರೆ.
19ನೇ ಕಂತಿನ ಹಣವನ್ನು ಫೆಬ್ರವರಿಯ ಕೊನೆಯ ವಾರದಲ್ಲಿ ವಿತರಿಸುವ ನಿರೀಕ್ಷೆಯಿದೆ. ಪಿಎಂ ಕಿಸಾನ್ ಪಾವತಿಗಳನ್ನು ಸಾಮಾನ್ಯವಾಗಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಸ್ಥಿರವಾದ ವೇಳಾಪಟ್ಟಿಯನ್ನು ಅನುಸರಿಸಿ ನೀಡಲಾಗುತ್ತದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು 2025ರ ಫೆಬ್ರವರಿ ಅಂತ್ಯದ ವೇಳೆಗೆ 19ನೇ ಕಂತನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ದೃಢಪಡಿಸಿದ್ದಾರೆ ಎಂದು ತಿಳಿದು ಬಂದಿದೆ.