ಗುರುವಾರ ನಡೆದಿದ್ದ ಬಾಂಗ್ಲಾದೇಶ ಮತ್ತು ಭಾರತ ನಡುವಣ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಶಿಖರ್ ಧವನ್ ಕೂಡ ಭಾಗಿಯಾಗಿದ್ದರು. ಶಿಖರ್ ಧವನ್ ಅವರು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬ್ರಾಂಡ್ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿದ್ದು ಅದಕ್ಕಾಗಿಯೇ ಅವರು ಪಂದ್ಯಾವಳಿಯಲ್ಲಿ ಹಾಜರಿದ್ದರು. ಆದರೆ ಇವರ ಜತೆ ವಿದೇಶಿ ಯುವತಿಯೊಬ್ಬಳು ಕೂಡ ಕಾಣಿಸಿಕೊಂಡಿದ್ದರು. ಇದೀಗ ನೆಟ್ಟಿಗರು ಈಕೆ ಯಾರು? ಎಂಬ ಮಾಹಿತಿ ಕಲೆಹಾಕಲು ಆರಂಭಿಸಿದ್ದಾರೆ.
ಧವನ್ ಜತೆ ಕಾಣಿಸಿಕೊಂಡ ಮಹಿಳೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗದಿದ್ದರೂ ಕೂಡ, ಸಾಮಾಜಿಕ ಮಾಧ್ಯಮದ ವಿಡಿಯೊ ಮತ್ತು ಫೋಟೊಗಳನ್ನು ಆಧರಿಸಿ, ಇವರ ಹೆಸರು ಸೋಫಿ ಶೈನ್ ಎಂದು ಹೇಳಲಾಗಿದೆ. ಐರ್ಲೆಂಡ್ ಮೂಲದವರಾಗಿರುವ ಇವರು ಸಲಹೆಗಾರರಾಗಿ ಕೆಲಸ ಮಾಡುತ್ತಾರೆ ಎಂದು ವರದಿಯಾಗಿದೆ. ಈ ಹಿಂದೆ ಭಾರತದಲ್ಲಿಯೂ ಧವನ್ ಜತೆ ಸೋಫಿ ಕಾಣಿಸಿಕೊಂಡಿದ್ದರು. ಮುಂಬೈ ಮಿಮಾನ ನಿಲ್ದಾಣದಲ್ಲಿ ಜತೆಯಾಗಿ ಒಂದೇ ಕಾರಿನಲ್ಲಿ ಬಂದು ವಿದೇಶ ಪ್ರವಾಶ ಮಾಡುವ ವೇಳೆ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು. ಧವನ್ ಮತ್ತು ಸೋಫಿ ಉತ್ತಮ ಸ್ನೇಹಿತರು ಎಂದು ಹೇಳಲಾಗಿದ್ದರೂ ಇವರಿಬ್ಬರು ಡೇಟಿಂಗ್ ನಡೆಸುತ್ತಿದ್ದಾರೆ ಎನ್ನುವ ಟಾಕ್ ಕೂಡ ಇದೆ.
ಶಿಖರ್ ಧವನ್ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಎಲ್ಲ ಮಾದರಿಯ ಅಂತಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದರು. ಭಾರತ ಪರ ಧವನ್ ಒಟ್ಟು 167 ಏಕದಿನ ಪಂದ್ಯಗಳನ್ನು ಆಡಿದ್ದು, 6793 ರನ್ ಬಾರಿಸಿದ್ದಾರೆ. ಇದರಲ್ಲಿ 39 ಅಧರ್ಶತಕ ಮತ್ತು 17 ಶತಕ ಒಳಗೊಂಡಿದೆ. 143 ರನ್ ಅವರ ಗರಿಷ್ಠ ಮೊತ್ತವಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ 34 ಪಂದ್ಯ ಆಡಿ 2315 ಗಳಿಸಿದ್ದಾರೆ. 7 ಶತಕ ಮತ್ತು 5 ಅರ್ಧಶತಕ ಒಳಗೊಂಡಿದೆ. ಟಿ20ಯಲ್ಲಿ ಉತ್ತಮ ದಾಖಲೆ ಹೊಂದಿರುವ ಧವನ್ 68 ಪಂದ್ಯ ಆಡಿ 1759 ರನ್ ಕಲೆಹಾಕಿದ್ದಾರೆ. 11 ಅರ್ಧಶತಕ ಬಾರಿಸಿದ್ದಾರೆ.
ಧವನ್ ಈ ಹಿಂದೆ ಆಯೇಶಾ ಮುಖರ್ಜಿ ಜತೆ ಮದುವೆಯಾಗಿ ವಿಚ್ಛೇದನ ಪಡೆದಿದ್ದರು. ಪತ್ನಿಯ ಅತಿಯಾದ ಕಿರುಕುಳದಿಂದ ಬೇಸತತ್ತು ಧವನ್ ಕೊನೆಗೆ ಕೋರ್ಟ್ ಮೊರೆ ಹೋಗಿ ವಿಚ್ಛೇದನ ಪಡೆದಿದ್ದರು. ಕಳೆದ ವರ್ಷ ಅಕ್ಟೋಬರ್ 4 ರಂದು ದೆಹಲಿಯ ಕೌಟುಂಬಿಕ ನ್ಯಾಯಾಲಯವು ಧವನ್‌ಗೆ ಆಯೇಷಾ ಮುಖರ್ಜಿಯಿಂದ ಅಧಿಕೃತವಾಗಿ ವಿಚ್ಛೇದನವನ್ನು ನೀಡಿತ್ತು.