ದೆಹಲಿ: ಚುನಾವಣೆ ಸಂದರ್ಭದಲ್ಲಿ ಭರವಸೆಗಳನ್ನು ನೀಡುವಾಗ ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖಂಡರಿಗೆ ನೀಡಿರುವ ಸಲಹೆಯನ್ನು ಆಧಾರವಾಗಿಟ್ಟುಕೊಂಡು ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷವನ್ನು ಕುಟುಕಿದ್ದಾರೆ.
ಭರವಸೆಗಳನ್ನು ಈಡೇರಿಸಲು ತನಗೆ ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದಿದ್ದರೂ, ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌ನ ಬಣ್ಣ ಈಗ ಬಯಲಾಗಿದೆ’ ಎಂದು ವ್ಯಂಗ್ಯವಾಡಿದ್ದಾರೆ.