ಕರ್ನಾಟಕದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಆವಾಂತಗಳೇ ಸೃಷ್ಟಿಸಿದೆ. ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ಮೇ 28 ರಿಂದ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ದು, ಬೆಂಗಳೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಧಾರವಾಡ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
 
				 
         
         
         
															 
                     
                     
                     
                     
                    


































 
    
    
        