CISF ಮಹಿಳಾ ಹೆಡ್ ಕಾನ್‌ಸ್ಟೆಬಲ್ ಓರ್ವರು ಶೌಚಾಲಯದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಮೃತರನ್ನು ಕಿರಣ್ ಎಂದು ವರದಿಯಿಂದ ತಿಳಿದು ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಬೆಳಿಗ್ಗೆ 8:44 ರ ಸುಮಾರಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ತಮ್ಮ ಸೇವಾ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದರು. ವಿಧಿವಿಜ್ಞಾನ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು ಎಂದು ವರದಿಯಾಗಿದೆ.ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.